Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:27 - ಕನ್ನಡ ಸತ್ಯವೇದವು C.L. Bible (BSI)

27 ಹಿಡಿದು ಮಾತಾಡುವವನು ಜ್ಞಾನಿ; ಶಾಂತ ಗುಣವುಳ್ಳವನು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹಿಡಿದು ಮಾತಾಡುವವನು ಜ್ಞಾನಿ. ಶಾಂತಾತ್ಮನು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜ್ಞಾನಿಯು ಎಚ್ಚರಿಕೆಯಿಂದ ಮಾತಾಡುವನು. ವಿವೇಕಿಯು ಬೇಗನೆ ಕೋಪಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:27
8 ತಿಳಿವುಗಳ ಹೋಲಿಕೆ  

ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ದೇವರೊಡನೆ ಸತ್ಸಂಬಂಧವೆಂಬ ಫಲವನ್ನು ಕೊಯ್ಯುತ್ತಾರೆ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.


ಹುಚ್ಚರ ಕೂಟದಲ್ಲಿ ಕೇಳಿಬರುವ ಅಧ್ಯಕ್ಷನ ಕೂಗಾಟಕ್ಕಿಂತ ಜ್ಞಾನಿಯ ಮೆಲ್ಲನೆಯ ಮಾತು ಕಿವಿಗೆ ಲೇಸು.


ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು