Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:3 - ಕನ್ನಡ ಸತ್ಯವೇದವು C.L. Bible (BSI)

3 ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:3
21 ತಿಳಿವುಗಳ ಹೋಲಿಕೆ  

ಬೆಳ್ಳಿಯನು ಪುಟಕ್ಕೆ ಹಾಕಿದಂತಲ್ಲ; ನಿನ್ನನು ಸಂಕಟವೆಂಬ ಕೆಂಡಕ್ಕೆ ಹಾಕಿರುವೆ. ಶೋಧಿಸಿರುವೆನು, ಪರಿಶೋಧಿಸಿರುವೆನು ನಿನ್ನನು ನನಗಾಗೆ;


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II


ಬೆಳ್ಳಿಬಂಗಾರಗಳಿಗೆ ಪುಟಕುಲುಮೆಗಳಿಂದ ಶೋಧನೆ; ಮನುಷ್ಯನಿಗೆ ತನ್ನ ಸ್ತುತಿಕೀರ್ತಿಯಿಂದ ಪರಿಶೋಧನೆ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರ ನಡೆಸುವನು, ಮನೆಮಕ್ಕಳ ಬಾಧ್ಯತೆಯಲ್ಲೂ ಪಾಲುಗಾರನಾಗುವನು.


“ನರಪುತ್ರನೇ, ಇಸ್ರಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಲೋಹ.


ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


“ಬೆಳ್ಳಿ ಸಿಕ್ಕುವ ಗಣಿಯುಂಟು ಚಿನ್ನದ ಅದುರು ದೊರಕುವ ಎಡೆಯುಂಟು.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.


ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು