ಜ್ಞಾನೋಕ್ತಿಗಳು 17:6 - ಕನ್ನಡ ಸತ್ಯವೇದವು C.L. Bible (BSI)6 ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ; ಹೆತ್ತವರು ಮಕ್ಕಳಿಗೆ ಭೂಷಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.