Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:15 - ಕನ್ನಡ ಸತ್ಯವೇದವು C.L. Bible (BSI)

15 ಬುದ್ಧಿವಂತನ ಮನಸ್ಸು ತಿಳುವಳಿಕೆಯನ್ನು ಗಳಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುವದು; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜ್ಞಾನಿಗೆ ಹೆಚ್ಚು ಕಲಿತುಕೊಳ್ಳುವುದಕ್ಕೆ ಇಷ್ಟ; ಆದ್ದರಿಂದ ಅವನು ಗಮನವಿಟ್ಟು ಕೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:15
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು.


ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಜ್ಞಾನ ಪಡೆಯಬೇಕೆಂಬುದೇ ಜ್ಞಾನಬೋಧೆಯ ಮೂಲಾಂಶ; ನಿನ್ನ ಸರ್ವಸಂಪತ್ತಿನಿಂದ ವಿವೇಕವನ್ನು ಗಳಿಸಿಕೊ.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.


ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಹಿತಕರ ಬುದ್ಧಿವಾದಕ್ಕೆ ಕಿವಿಗೊಡುವವನು ಸಜ್ಜನರ ಸತ್ಸಂಘದಲ್ಲಿ ಪಾಲ್ಗೊಳ್ಳುವನು.


ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು