Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:16 - ಕನ್ನಡ ಸತ್ಯವೇದವು C.L. Bible (BSI)

16 ಕಾಣಿಕೆ ತರುವವನಿಗೆ ಬಾಗಿಲು ತೆರೆಯುತ್ತದೆ; ಶ್ರೀಮಂತನ ಸಾನ್ನಿಧ್ಯಕ್ಕೂ ಅದು ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಾಣಿಕೆಯು ಅನುಕೂಲತೆಗೂ ಶ್ರೀಮಂತರ ಸಾನ್ನಿಧ್ಯಪ್ರವೇಶಕ್ಕೂ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪ್ರಮುಖನನ್ನು ಭೇಟಿಯಾಗಬೇಕಿದ್ದರೆ, ಅವನಿಗೆ ಒಂದು ಉಡುಗೊರೆಯನ್ನು ಕೊಡು. ಆಗ ನೀನು ಅವನನ್ನು ಸುಲಭವಾಗಿ ಭೇಟಿಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:16
10 ತಿಳಿವುಗಳ ಹೋಲಿಕೆ  

ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!


ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.


ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು.


‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.


ಗುಟ್ಟಾಗಿ ಬಹುಮಾನ ಕೊಟ್ಟು ಸಿಟ್ಟನ್ನು ಅಡಗಿಸುತ್ತಾರೆ; ಮಡಿಲಲ್ಲಿ ಲಂಚವನ್ನು ಮುಚ್ಚಿಟ್ಟು ಕೋಪವನ್ನು ಆರಿಸುತ್ತಾರೆ.


ಜೆಸ್ಸೆಯನು ರೊಟ್ಟಿಯನ್ನು, ಒಂದು ಬುದ್ದಲಿ ದ್ರಾಕ್ಷಾರಸವನ್ನು ಹಾಗು ಒಂದು ಹೋತಮರಿಯನ್ನು ಕತ್ತೆಯ ಮೇಲೆ ಹೇರಿಸಿ, ತನ್ನ ಮಗ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.


ಮೊದಲು ವಾದಿಸುವವನು ನ್ಯಾಯವಾದಿಯೆಂದೇ ತೋರುವನು; ಅವನ ಬಂಡವಾಳ ಗೊತ್ತಾಗುವುದು ಪ್ರತಿವಾದಿ ಎದ್ದ ಮೇಲೆ.


ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು