Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:24 - ಕನ್ನಡ ಸತ್ಯವೇದವು C.L. Bible (BSI)

24 ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಬಹುಮಂದಿ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ; ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ವಿುತ್ರನುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಬ್ಬನಿಗೆ ಬಹಳ ಮಂದಿ ಸ್ನೇಹಿತರಿದ್ದರೆ, ಅದು ಅವನನ್ನು ನಾಶಮಾಡಬಹುದು. ಆದರೆ ನಿಜವಾದ ಸ್ನೇಹಿತನು ಸಹೋದರನಿಗಿಂತಲೂ ನಂಬಿಗಸ್ತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:24
17 ತಿಳಿವುಗಳ ಹೋಲಿಕೆ  

ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.


ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.


ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ!


ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ಅಬ್ಷಾಲೋಮನು, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಏಕೆ ಹೋಗಲಿಲ್ಲ?” ಎಂದನು.


ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು.


ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ಅದಕ್ಕೆ ಇತ್ತೈ, “ಸರ್ವೇಶ್ವರನಾಣೆ, ನನ್ನ ಒಡೆಯರಾದ ಅರಸರ ಜೀವದಾಣೆ, ಪ್ರಾಣಹೋದರೂ ಉಳಿದರೂ ನನ್ನ ಒಡೆಯರಾದ ಅರಸರಿರುವಲ್ಲಿಗೇ ಹೋಗುವೆನು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು