Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:3 - ಕನ್ನಡ ಸತ್ಯವೇದವು C.L. Bible (BSI)

3 ದುರಾಚಾರವಿದ್ದಲ್ಲಿ ತಾತ್ಸಾರ; ಮಾನ ಕಳೆದುಕೊಂಡಲ್ಲಿ ಧಿಕ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಕೇಡುಮಾಡಿದರೆ ಜನರು ನಿನ್ನನ್ನು ಇಷ್ಟಪಡುವುದಿಲ್ಲ; ನಾಚಿಕೆಕರವಾದದ್ದನ್ನು ಮಾಡಿದರೆ ನಿನ್ನನ್ನು ಪರಿಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:3
14 ತಿಳಿವುಗಳ ಹೋಲಿಕೆ  

ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ದುಷ್ಟರ ವೃದ್ಧಿ ಪಾಪಾಭಿವೃದ್ಧಿ; ಅವರ ಪತನವನ್ನು ಸಜ್ಜನರು ಕಣ್ಣಾರೆ ಕಾಣುವರು.


ಅಹಂಕಾರವಿದ್ದಲ್ಲಿ ಅವಮಾನ; ಸ್ವಾರ್ಥ ನಿಗ್ರಹವಿದ್ದಲ್ಲಿ ಸುಜ್ಞಾನ.


ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


“ನಮ್ಮ ದೇವರೇ ಆಲಿಸಿ: ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡಿ. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡಿ.


ಆಗ ಸೌಲನು ಸಿಡಿದೆದ್ದು ಯೋನಾತಾನನಿಗೆ, “ಎಲೋ, ದುಷ್ಟದಾಸಿಯ ಮಗನೇ, ನೀನು ಜೆಸ್ಸೆಯನ ಮಗನೊಡನೆ ಸ್ನೇಹದಿಂದ ಇರುವುದು ನನಗೆ ಗೊತ್ತಿಲ್ಲವೇ? ಈ ಸ್ನೇಹದಿಂದ ನಿನಗೂ ಹೆತ್ತವಳಿಗೂ ಮಾನಭಂಗ ತರುತ್ತಾ ಇರುವೆ.


ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.


ಸತ್ಪುರುಷನ ನುಡಿ ಜಲನಿಧಿ; ಜ್ಞಾನದ ಬುಗ್ಗೆ ಹರಿಯುವ ತೊರೆ.


ಸಜ್ಜನನಿಗೆ ಮೋಸಮಾತು ಅಸಹ್ಯ; ದುರ್ಜನನ ನಡತೆ ನಿಂದಾಸ್ಪದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು