Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:4 - ಕನ್ನಡ ಸತ್ಯವೇದವು C.L. Bible (BSI)

4 ಸತ್ಪುರುಷನ ನುಡಿ ಜಲನಿಧಿ; ಜ್ಞಾನದ ಬುಗ್ಗೆ ಹರಿಯುವ ತೊರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಾಯಿಮಾತುಗಳು ಆಳವಾದ ನೀರಿನಂತಿರಲು ಸಾಧ್ಯ; ಆದರೆ ಜ್ಞಾನದ ಮೂಲವು ನುಗ್ಗಿಬರುವ ತೊರೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:4
11 ತಿಳಿವುಗಳ ಹೋಲಿಕೆ  

ಮಾನವನ ಅಂತರಾಲೋಚನೆಗಳು ಆಳವಾದ ಜಲನಿಧಿ; ವಿವೇಕಿಯಾದ ವ್ಯಕ್ತಿ ಅದನ್ನು ಹೊರ ತೆಗೆಯಬಲ್ಲ ಸೇದಿ.


ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.


ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಜ್ಞಾನಿಯ ಬೋಧೆ ಜೀವದ ಬುಗ್ಗೆ; ಮಾಡುವುದದು ಮರಣದಿಂದ ಬಿಡುಗಡೆ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.


ದುರಾಚಾರವಿದ್ದಲ್ಲಿ ತಾತ್ಸಾರ; ಮಾನ ಕಳೆದುಕೊಂಡಲ್ಲಿ ಧಿಕ್ಕಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು