Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:6 - ಕನ್ನಡ ಸತ್ಯವೇದವು C.L. Bible (BSI)

6 ಕಲಹವೆಬ್ಬಿಸುವುದು ಬುದ್ಧಿಹೀನನ ತುಟಿ; ಪೆಟ್ಟಿಗಾಗಿ ಕೂಗಿಕೊಳ್ಳುವುದು ಅವನ ಬಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಜ್ಞಾನಹೀನನ ತುಟಿಗಳು ಜಗಳವನ್ನು ಹೂಡುತ್ತವೆ; ಅವನ ಬಾಯಿ ಪೆಟ್ಟುತಿನ್ನುವದಕ್ಕೆ ಕೂಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೂಢನು ವಾದಕ್ಕೆ ಇಳಿಯುತ್ತಾನೆ; ಅವನ ಮಾತುಗಳು ಜಗಳವನ್ನು ಎಬ್ಬಿಸಿ, ಏಟಿಗಾಗಿ ಕೇಳಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:6
14 ತಿಳಿವುಗಳ ಹೋಲಿಕೆ  

ಕಲ್ಲು ಭಾರ, ಮರಳು ಭಾರ, ಮೂಢನ ರೇಗಾಟ ಇವೆರಡಕ್ಕೂ ಬಲುಭಾರ.


ಮೂರ್ಖನ ಸಂಗಡ ಜ್ಞಾನಿ ತರ್ಕಮಾಡಿದ್ದೆ ಆದರೆ ಆ ಮೂರ್ಖ ರೇಗಬಹುದು, ನಗಬಹುದು, ತರ್ಕಮಾತ್ರ ಮುಗಿಯದು.


ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಿಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.


ಕಲಹಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು; ಕಲಹಕ್ಕೆ ಕೈಹಾಕುವ ಪ್ರತಿಯೊಬ್ಬನು ಮೂರ್ಖನು.


ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.


ಕಡುಕೋಪಿ ದಂಡನೆಯನ್ನು ಅನುಭವಿಸಲಿ ಬಿಡು; ಒಮ್ಮೆ ಬಿಡಿಸಿದರೆ, ಬಾರಿಬಾರಿಗೂ ಬಿಡಿಸಬೇಕಾಗುವುದು.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವುದು; ಜ್ಞಾನಿಗಳ ವಚನಗಳು ಅವರನ್ನು ಕಾಪಾಡುವುವು.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು; ಜಾಣನು ನಿಂದೆಯನ್ನು ಮರೆಮಾಚುವನು.


ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು