Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:1 - ಕನ್ನಡ ಸತ್ಯವೇದವು C.L. Bible (BSI)

1 ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಪಟವಾಗಿ ಮಾತಾಡುವ ಮೂಢನಿಗಿಂತಲೂ ನಿರ್ದೋಷವಾಗಿ ನಡೆಯುವ ದರಿದ್ರನೇ ಶ್ರೇಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:1
16 ತಿಳಿವುಗಳ ಹೋಲಿಕೆ  

ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.


ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.


ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.


ನೆಮ್ಮದಿಯಿಲ್ಲದ ಸಿರಿಸಂಪತ್ತಿಗಿಂತಲು, ಸರ್ವೇಶ್ವರನ ಭಯಭಕ್ತಿಯಿಂದ ಕೂಡಿದ ಕಿಂಚಿತ್ತೇ ಮೇಲು.


ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ.


ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.


ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II


ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು.


ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II


ಒಡೆಯಾ, ಮಂದಮತಿಯಾದ ಆ ನಾಬಾಲನನ್ನು ತಾವು ಲಕ್ಷಿಸಬೇಡಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಮೂರ್ಖನೇ ಆಗಿರುತ್ತಾನೆ. ನಿಮ್ಮ ದಾಸಿಯಾದ ನಾನು, ತಾವು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸು, ಕೆಟ್ಟನುಡಿಗಳನ್ನು ಬಾಯಿಂದ ದೂರಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು