Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:10 - ಕನ್ನಡ ಸತ್ಯವೇದವು C.L. Bible (BSI)

10 ಭೋಗಜೀವನ ಬುದ್ಧಿಹೀನನಿಗೆ ಯೋಗ್ಯವಲ್ಲ; ದೊರೆಗಳ ಮೇಲೆ ದೊರೆತನ ದಾಸನಿಗೆ ತಕ್ಕುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೂಢನಿಗೆ ಮೃದುಜೀವನವು ಅಯುಕ್ತ; ದಾಸನಿಗೆ ದೊರೆಗಳ ಮೇಲಣ ದೊರೆತನ ಇನ್ನೂ ಅಯುಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೂಢನಿಗೆ ಐಶ್ವರ್ಯವು ಸೂಕ್ತವಲ್ಲ; ರಾಜಕುಮಾರರ ಮೇಲೆ ದೊರೆತನ ಮಾಡುವುದು ಗುಲಾಮನಿಗೆ ಮತ್ತಷ್ಟು ಸೂಕ್ತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:10
17 ತಿಳಿವುಗಳ ಹೋಲಿಕೆ  

ಬೇಸಿಗೆಯಲ್ಲಿ ಮಂಜು ಬೀಳುತ್ತದೆಯೇ? ಸುಗ್ಗಿಯಲ್ಲಿ ಮಳೆ ಬರುತ್ತದೆಯೇ? ಹಾಗೆಯೆ ಬುದ್ಧಿಹೀನನಿಗೆ ತೋರುವ ಮಾನಮರ್ಯಾದೆ.


ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ. ಕಣ್ಣೀರಿಟ್ಟು ಗೋಳಾಡಿರಿ. ನಗುವುದನ್ನು ಬಿಟ್ಟು ದುಃಖಿಸಿರಿ; ಸಂತೋಷವನ್ನು ಬಿಟ್ಟು ಶೋಕಿಸಿರಿ.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.


ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಉತ್ತಮವಾದ ಮಾತು ಮೂರ್ಖನಿಗೆ ಹಿಡಿಸದು; ಸುಳ್ಳುಮಾತು ಉತ್ತಮನಿಗೆ ಮತ್ತೂ ಹಿಡಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು