Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:14 - ಕನ್ನಡ ಸತ್ಯವೇದವು C.L. Bible (BSI)

14 ಮನೆಮಾರು, ಆಸ್ತಿಪಾಸ್ತಿ ಬರುತ್ತವೆ ಪಿತ್ರಾರ್ಜಿತವಾಗಿ; ವಿವೇಕಿಯಾದ ಹೆಂಡತಿ ಸಿಕ್ಕುವುದು ಸರ್ವೇಶ್ವರನ ಅನುಗ್ರಹವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮನೆಮಾರೂ ಆಸ್ತಿಪಾಸ್ತಿಯೂ ಪಿತೃಗಳಿಂದ ದೊರಕುವವು; ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮಕ್ಕಳು ತಂದೆಯಿಂದ ಮನೆಗಳನ್ನು ಮತ್ತು ಹಣವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳುವರು. ವಿವೇಕಿಯಾದ ಹೆಂಡತಿಯಾದರೋ ಯೆಹೋವನಿಂದ ಬಂದ ಉಡುಗೊರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:14
12 ತಿಳಿವುಗಳ ಹೋಲಿಕೆ  

ಮಡದಿಯನ್ನು ಪಡೆಯುವುದು ಪುಣ್ಯಪಡೆದ ಹಾಗೆ, ಅದು ಸರ್ವೇಶ್ವರನ ಅನುಗ್ರಹಪಡೆದ ಹಾಗೆ.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.


ತಂದೆ ತನ್ನ ಆಸ್ತಿಯನ್ನು ಮಕ್ಕಳಿಗೆ ಸೊತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು, ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು.


ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.


"ಕುಡಿಯಪ್ಪಾ, ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ’ ಎನ್ನುವಳೋ ಅವಳೇ ಸರ್ವೇಶ್ವರ ಸ್ವಾಮಿಯಿಂದ ನನ್ನೊಡೆಯನ ಮಗನಿಗೆ ಚುನಾಯಿತಳಾದ ಕನ್ನಿಕೆಯಾಗಿರಲಿ' ಎಂದೆ,


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆ ಬಹು ಬುದ್ಧಿವಂತೆ ಹಾಗು ಸುಂದರಿ. ಕಾಲೇಬನ ವಂಶದವನಾದ ಆ ಮನುಷ್ಯನಾದರೊ ನಿಷ್ಠುರನು ಹಾಗು ದುಷ್ಕರ್ಮಿ. ಅವನು ಬಹು ಧನವಂತನೂ ಆಗಿದ್ದ. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಮ್ಮೆ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು