Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:15 - ಕನ್ನಡ ಸತ್ಯವೇದವು C.L. Bible (BSI)

15 ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೋಮಾರಿಗೆ ಗಾಢವಾದ ನಿದ್ರೆ. ಮೈಗಳ್ಳನಿಗೆ ಹಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:15
14 ತಿಳಿವುಗಳ ಹೋಲಿಕೆ  

ಕುಡುಕನಿಗೂ ಹೊಟ್ಟೆಬಾಕನಿಗೂ ಕಾದಿದೆ ದುರ್ಗತಿ; ಹರಕು ಬಟ್ಟೆಗಳನ್ನು ಹೊದಿಸುವುದು ಅವರ ನಿದ್ರಾಸಕ್ತಿ.


ನಿದ್ದೆಯಲ್ಲೆ ನಿರತನಾಗಿರಬೇಡ, ಬಡವನಾಗಿ ಬಿಡುವೆ. ಕಣ್ಣು ತೆರೆದು ದುಡಿ, ಹೊಟ್ಟೆತುಂಬ ಊಟ ಪಡೆವೆ.


ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


“ಇನ್ನೂ ಸ್ವಲ್ಪ ನಿದ್ರೆ, ಇನ್ನೂ ತುಸು ತೂಕಡಿಕೆ, ಕೈ ಮುದುಡಿಕೊಂಡು ಇನ್ನೂ ಕೊಂಚ ಮಲಗಿಕೊಳ್ಳುವೆ” ಎನ್ನುವೆಯಾ?


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.


ಮೈಗಳ್ಳ ಕೈ ಹಾಕುತ್ತಾನೆ ತುತ್ತಿಗೆ; ಆದರೆ ಎತ್ತಲಾರ ಬಾಯ ಹತ್ತಿರಕ್ಕೆ.


ಮನೆಗೆಲಸವನ್ನೆಲ್ಲ ಚೆನ್ನಾಗಿ ನೋಡಿಕೊಳ್ಳುತ್ತಾಳೆ; ಆಕೆ ಕೆಲಸಮಾಡದೆ ಊಟಮಾಡುವವಳಲ್ಲ.


ಬಡತನ ನಿನ್ನ ಮೇಲೆರಗುವುದು ದಾರಿಗಳ್ಳನಂತೆ; ಅಭಾವ ನಿನ್ನ ಮೇಲೆ ಬೀಳುವುದು ಪಂಜುಗಳ್ಳನಂತೆ.


ಸೋಮಾರಿಯಾದ ಕೆಲಸಗಳ್ಳನು, ಕೆಡುಕನಿಗೆ ರಕ್ತಸಂಬಂಧಿಕನು.


“ಹೊರಗಡೆ ಕಾದಿದೆ ಸಿಂಹ, ಬೀದಿಗೆ ಕಾಲಿಟ್ಟರೆ ತಿಂದುಬಿಡುವುದು!” ಇದು ಮೈಗಳ್ಳನ ಪಿಳ್ಳೆಯ ನೆವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು