Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:27 - ಕನ್ನಡ ಸತ್ಯವೇದವು C.L. Bible (BSI)

27 ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ ಉಪದೇಶ ಕೇಳುವದನ್ನೇ ಬಿಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀನು ಬುದ್ಧಿವಾದವನ್ನು ಕೇಳದಿದ್ದರೆ, ನಿನ್ನ ತಪ್ಪುಗಳಲ್ಲಿಯೇ ಮುಂದುವರಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:27
22 ತಿಳಿವುಗಳ ಹೋಲಿಕೆ  

“ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು; ಇನ್ನೂ ಅಧಿಕವಾಗಿ ಕೊಡುವರು.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಮೂರ್ಖನಿಂದ ದೂರವಿರು; ಜ್ಞಾನವಚನ ಅವನಲ್ಲಿ ಕಾಣಸಿಗದು.


ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.


ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ.


ರೊಟ್ಟಿಯ ಹಿಟ್ಟನ್ನು ಹುದುಗೆಬ್ಬಿಸುವ ಹುಳಿಯನ್ನು ಕುರಿತು ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯವಾಗಿ ಜಾಗರೂಕರಾಗಿರಬೇಕೆಂದು ಯೇಸು ಎಚ್ಚರಿಸಿದರೆಂದು ಆಗ ಶಿಷ್ಯರು ಅರ್ಥಮಾಡಿಕೊಂಡರು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.


ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು ನಿಂದೆ ಅವಮಾನಗಳಿಗೆ ತುತ್ತಾಗುವನು.


ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು.


“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ಆಗ ಯೋನಾದಾಬನು, “ನೀನು ಅಸ್ವಸ್ಥನಾದವನಂತೆ ನಟಿಸಿ ಹಾಸಿಗೆಯ ಮೇಲೆ ಮಲಗಿಕೋ; ನಿನ್ನ ತಂದೆ ನಿನ್ನನ್ನು ನೋಡುವುದಕ್ಕೆ ಬಂದಾಗ, ‘ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸಿ. ಆಕೆ ನನ್ನೆದುರಿನಲ್ಲೇ ಸಿದ್ಧಮಾಡಿಕೊಡುವುದಾದರೆ ಊಟಮಾಡುತ್ತೇನೆ’ ಎಂದು ಹೇಳು,” ಎಂದನು.


ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬುದಾಗಿ ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು