Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:28 - ಕನ್ನಡ ಸತ್ಯವೇದವು C.L. Bible (BSI)

28 ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು; ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದುಷ್ಟಸಾಕ್ಷಿಯು ನ್ಯಾಯವನ್ನು ಪರಿಹಾಸ್ಯ ಮಾಡುವನು; ಕೆಡುಕರ ಮಾತುಗಳು ಅನ್ಯಾಯವನ್ನು ಹರಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:28
15 ತಿಳಿವುಗಳ ಹೋಲಿಕೆ  

ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು?


ಈ ಯೋಬನಂಥ ಮನುಜನು ಯಾರಿದ್ದಾನೆ? ಇಗೋ, ದೇವದೂಷಣೆಯನು ನೀರಿನಂತೆ ಕುಡಿಯುತ್ತಾನೆ!


ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.


ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು.


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.


ಇವನ ಉಳಿದ ಚರಿತ್ರೆ, ಪರಾಕ್ರಮ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ನೀಚನು ಕೇಡೆಂಬ ಗುಳಿಯನ್ನು ತೋಡುತ್ತಾನೆ; ಸುಡುವ ಬೆಂಕಿಯ ಜ್ಞಾಲೆ ಅವನ ನಾಲಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು