Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:5 - ಕನ್ನಡ ಸತ್ಯವೇದವು C.L. Bible (BSI)

5 ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮತ್ತೊಬ್ಬನ ಮೇಲೆ ಸುಳ್ಳುಹೇಳುವವನು ದಂಡಿಸಲ್ಪಡುವನು. ಸುಳ್ಳುಸಾಕ್ಷಿಗೆ ಸುರಕ್ಷತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:5
14 ತಿಳಿವುಗಳ ಹೋಲಿಕೆ  

ಸುಳ್ಳು ಸಾಕ್ಷಿ ಹೇಳುವವನೇ ಅಳಿದುಹೋಗುವನು; ಕೇಳಿದ್ದನ್ನೆ ಹೇಳುವವನ ಸಾಕ್ಷಿ ಅಳಿಯದೆ ಉಳಿಯುವುದು.


ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.


‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ಇಂಥಾ ದ್ರೋಹಿಗಳು ತಪ್ಪಿಸಿಕೊಳ್ಳಬಾರದಯ್ಯಾ I ರೌದ್ರದಿಂದಾ ಜನರನು ನೀ ಕೆಡವಿಬಿಡು ದೇವಾ II


ಸತ್ಯಸಾಕ್ಷಿ ಸುಳ್ಳಾಡದ ವ್ಯಕ್ತಿ; ಸುಳ್ಳು ಸಾಕ್ಷಿ ಅಬದ್ಧಪ್ರಿಯ ವ್ಯಕ್ತಿ.


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.


ಸತ್ಯವಾಡುವವನ ಸಾಕ್ಷಿ ಪ್ರಾಣಕ್ಕೆ ರಕ್ಷಣೆ; ಸುಳ್ಳಾಡುವವನ ಮಾತು ಬರೀ ವಂಚನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು