Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:7 - ಕನ್ನಡ ಸತ್ಯವೇದವು C.L. Bible (BSI)

7 ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು; ಹೌದು, ವಿುತ್ರರೂ ಅವನಿಗೆ ದೂರವಾಗುವರು. [ಅವರ] ಬರೀ ಮಾತುಗಳನ್ನು [ನಂಬಿ] ಹಿಂಬಾಲಿಸಿದರೆ ಏನೂ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:7
15 ತಿಳಿವುಗಳ ಹೋಲಿಕೆ  

ಧನವಂತನಿಗೆ ಸ್ನೇಹಿತರು ಬಹುಮಂದಿ; ಬಡವನಿಗಿದ್ದ ಗೆಳೆಯನೂ ಪರಾರಿ.


ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?


ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.


ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.


ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II


ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II


ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು