Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:8 - ಕನ್ನಡ ಸತ್ಯವೇದವು C.L. Bible (BSI)

8 ಬುದ್ಧಿಯನ್ನು ಗಳಿಸುವವನು ತನಗೆ ತಾನೇ ಗೆಳೆಯನು; ವಿವೇಕವನ್ನು ಕಾಪಾಡುವವನು ಪಡೆಯುವನು ಏಳಿಗೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ವಿುತ್ರನು; ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತನ್ನನ್ನು ಪ್ರೀತಿಸುವ ಪ್ರತಿಯೊಬ್ಬನು ಜ್ಞಾನಿಯಾಗಲು ಪ್ರಯಾಸಪಡುವನು; ಅಭಿವೃದ್ಧಿಗಾಗಿ ಇಷ್ಟಪಡುವವನು ತಿಳುವಳಿಕೆಯನ್ನು ಹೊಂದಿಕೊಳ್ಳಲು ಪ್ರಯತ್ನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:8
17 ತಿಳಿವುಗಳ ಹೋಲಿಕೆ  

ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ಜ್ಞಾನವನ್ನು ಕೈಬಿಡದಿದ್ದರೆ, ಅದು ನಿನ್ನನ್ನು ಕಾಪಾಡುವುದು; ನೀನದನ್ನು ಪ್ರೀತಿಸಿದೆಯಾದರೆ, ಅದು ನಿನ್ನನ್ನು ಕಾಯುವುದು.


“ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ಆ ನುಡಿಗಳನ್ನು ನಿನ್ನ ಅಂತರಂಗದಲ್ಲಿ ಕಾದಿಡು; ಅವು ನಿನ್ನ ತುಟಿಯ ಮೇಲೆ ಸಿದ್ಧವಿದ್ದರೆ ಒಳಿತು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!


ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ.


ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.


ಮಗನೇ, ಸುಜ್ಞಾನ, ಸದ್ಬುದ್ಧಿಗಳು ನಿನ್ನಲ್ಲಿ ಸ್ಥಿರವಾಗಿರಲಿ; ನಿನ್ನ ಕಣ್ಣುಗಳಿಂದ ಅವು ಮರೆಯಾಗದಿರಲಿ.


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.


ಅವು ನಿನ್ನಾತ್ಮಕ್ಕೆ ಜೀವಪ್ರದಾನವಾಗಿವೆ, ನಿನ್ನ ಕೊರಳಿಗೆ ಭೂಷಣವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು