Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:9 - ಕನ್ನಡ ಸತ್ಯವೇದವು C.L. Bible (BSI)

9 ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸುಳ್ಳುಸಾಕ್ಷಿಯು ದಂಡಿಸಲ್ಪಡುವನು; ಸುಳ್ಳುಗಾರನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:9
16 ತಿಳಿವುಗಳ ಹೋಲಿಕೆ  

ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಸುಳ್ಳು ಸಾಕ್ಷಿ ಹೇಳುವವನೇ ಅಳಿದುಹೋಗುವನು; ಕೇಳಿದ್ದನ್ನೆ ಹೇಳುವವನ ಸಾಕ್ಷಿ ಅಳಿಯದೆ ಉಳಿಯುವುದು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು