Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:1 - ಕನ್ನಡ ಸತ್ಯವೇದವು C.L. Bible (BSI)

1 ಮಗನೇ, ನನ್ನ ಮಾತುಗಳನ್ನು ಅಂಗೀಕರಿಸು; ನಿಧಿಯಂತೆ ನನ್ನ ವಿಧಿಗಳನ್ನು ಕಾದಿರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೊ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:1
21 ತಿಳಿವುಗಳ ಹೋಲಿಕೆ  

ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ವಿವೇಕ ಹಾಗೂ ನ್ಯಾಯನೀತಿಯ ಮಾರ್ಗದಲ್ಲಿ ಶಿಕ್ಷಿತರಾಗುವುದಕ್ಕೆ ಮತ್ತು


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.


ಮಗನೇ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿ ಇಡು.


ಅವನ್ನು ನಿರಂತರವಾಗಿ ಹೃದಯಕ್ಕೆ ಬಂಧಿಸಿಕೊ; ಕಂಠಾಭರಣವಾಗಿ ಕೊರಳಿಗೆ ಧರಿಸಿಕೊ.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಮಗನೇ, ನನ್ನ ಮಾತುಗಳನ್ನು ಆಲಿಸಿ ಕೇಳು; ಕೇಳಿದೆಯಾದರೆ ಹೆಚ್ಚುವುವು ನಿನ್ನ ಜೀವನದ ವರ್ಷಗಳು.


ಮರಿಯಳಾದರೋ ಈ ವಿಷಯಗಳನ್ನೆಲ್ಲಾ ಮನಸ್ಸಿನಲ್ಲಿಯೇ ಇಟ್ಟುಕೊಂಡು ಆಲೋಚಿಸುತ್ತಾ ಬಂದಳು.


“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II


ಇದು ಸಮುದ್ರದ ಆಚೆ ಇರುವ ಮಾತಲ್ಲ; ‘ನಮಗಾಗಿ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.


ಕೇಳಿ, ಜ್ಞಾನವೆಂಬಾಕೆ ಕರೆಯುತ್ತಾಳೆ ವಿವೇಕವೆಂಬಾಕೆ ಕೂಗಿ ಕರೆಯುತ್ತಿದ್ದಾಳೆ!


ಜ್ಞಾನವೆಂಬಾಕೆ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಅದಕ್ಕೆ ಏಳು ಸ್ತಂಭಗಳನ್ನು ಕೆತ್ತಿಸಿದ್ದಾಳೆ.


ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು