Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:10 - ಕನ್ನಡ ಸತ್ಯವೇದವು C.L. Bible (BSI)

10 ಜ್ಞಾನ ಉದಯಿಸುವುದು ನಿನ್ನ ಹೃದಯದೊಳಗೆ, ತಿಳುವಳಿಕೆ ಬೆಳಗುವುದು ನಿನ್ನ ಆತ್ಮದೊಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವದು, ತಿಳುವಳಿಕೆಯು ನಿನ್ನ ಆತ್ಮಕ್ಕೆ ಅಂದವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ತಿಳುವಳಿಕೆಯೊಡನೆ ಸಂತೋಷವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:10
15 ತಿಳಿವುಗಳ ಹೋಲಿಕೆ  

ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ.


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II


ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.


ಆ ನುಡಿಗಳನ್ನು ನಿನ್ನ ಅಂತರಂಗದಲ್ಲಿ ಕಾದಿಡು; ಅವು ನಿನ್ನ ತುಟಿಯ ಮೇಲೆ ಸಿದ್ಧವಿದ್ದರೆ ಒಳಿತು.


ಜ್ಞಾನವನ್ನು ಕೈಬಿಡದಿದ್ದರೆ, ಅದು ನಿನ್ನನ್ನು ಕಾಪಾಡುವುದು; ನೀನದನ್ನು ಪ್ರೀತಿಸಿದೆಯಾದರೆ, ಅದು ನಿನ್ನನ್ನು ಕಾಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು