Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:16 - ಕನ್ನಡ ಸತ್ಯವೇದವು C.L. Bible (BSI)

16 ವಿವೇಕವು ನಿನ್ನನ್ನು ತಪ್ಪಿಸುವುದು ಜಾರಳಿಂದ, ಸವಿಮಾತಾಡುವ ಆ ಪರಸ್ತ್ರೀಯಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ವಿವೇಕವು ನಿನ್ನನ್ನು ಜಾರಳಿಂದ ಎಂದರೆ ಸವಿಮಾತನಾಡುವ ಪರಸ್ತ್ರೀಯಿಂದ, ತಪ್ಪಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜಾರಿಣಿಯಿಂದಲೂ ದಾರಿತಪ್ಪಿದ ಪರಸ್ತ್ರೀಯ ವಶೀಕರಣದ ಮಾತುಗಳಿಂದಲೂ ಜ್ಞಾನವು ನಿನ್ನನ್ನು ರಕ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:16
11 ತಿಳಿವುಗಳ ಹೋಲಿಕೆ  

ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.


ವೇಶ್ಯೆ ಒಂದು ಆಳವಾದ ಬಾವಿ; ವ್ಯಭಿಚಾರಿಣಿ ಇಕ್ಕಟ್ಟಾದ ಗುಳಿ.


ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಸರ್ವೇಶ್ವರನಿಗೆ ಸಿಟ್ಟೆಬ್ಬಿಸಿದವನು ಬೀಳುವನು ಅದರಲ್ಲಿ.


ಕೆಟ್ಟ ಹೆಂಗಸರ ಸಹವಾಸದಿಂದ, ಪರಸ್ತ್ರೀಯರ ಮಾತಿನ ಮೋಡಿಯಿಂದ, ಅವು ಕಾಪಾಡಬಲ್ಲವು ನಿನ್ನನ್ನು.


ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.


ಆಕೆ ಔತಣದ ಏಳು ದಿನಗಳಲ್ಲೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನ ಆಕೆ ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳೇಬಿಟ್ಟನು. ಆಕೆ ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು