Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:2 - ಕನ್ನಡ ಸತ್ಯವೇದವು C.L. Bible (BSI)

2 ಜ್ಞಾನದ ಕಡೆಗೆ ಕಿವಿಗೊಡು, ವಿವೇಕದ ಕಡೆಗೆ ಮನತಿರುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜ್ಞಾನಕ್ಕೆ ಕಿವಿಗೊಡು; ಅದನ್ನು ಅರ್ಥಮಾಡಿಕೊಳ್ಳಲು ನಿನ್ನಿಂದಾದಷ್ಟು ಪ್ರಯತ್ನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಜ್ಞಾನಕ್ಕೆ ಕಿವಿಗೊಟ್ಟು, ತಿಳುವಳಿಕೆಗೆ ನಿನ್ನ ಹೃದಯವನ್ನು ತಿರುಗಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:2
15 ತಿಳಿವುಗಳ ಹೋಲಿಕೆ  

ಉಪದೇಶವನ್ನು ಕೇಳುವುದರತ್ತ ಮನಸ್ಸಿಡು; ತಿಳುವಳಿಕೆಯ ಮಾತುಗಳಿಗೆ ಕಿವಿಗೊಡು.


ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.


ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II


ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ನಾನು ಜ್ಞಾನವನ್ನು ಪಡೆಯಲು, ಜಗದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ ಇದು ನನಗೆ ಮನದಟ್ಟಾಯಿತು: ಒಬ್ಬನು ರಾತ್ರಿ ಹಗಲು, ಕಣ್ಣುಗಳಿಗೆ ನಿದ್ರೆ ಹಚ್ಚಗೊಡದೆ ಪರಿಶೀಲಿಸಿದರೂ ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಲು ಆಗದು.


ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.


ನಾನು ಮತ್ತೆ ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ, ವಿಚಾರಿಸಿ, ಗ್ರಹಿಸಿಕೊಳ್ಳಲು ಆಶಿಸಿದೆ; ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳಲು ಮನಸ್ಸುಮಾಡಿದೆ.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ಬುದ್ಧಿಗಾಗಿ ಮೊರೆಯಿಡು, ವಿವೇಕಕ್ಕಾಗಿ ಕೂಗಿಕೊಳ್ಳು.


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.


ಮಗನೇ, ನನ್ನ ಮಾತನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.


ವ್ಯಭಿಚಾರಿಯು ಕೇವಲ ಬುದ್ಧಿಶೂನ್ಯನು; ತನ್ನೀ ಕೃತ್ಯದಿಂದ ಸ್ವನಾಶಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು