Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:22 - ಕನ್ನಡ ಸತ್ಯವೇದವು C.L. Bible (BSI)

22 ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದುಷ್ಟರಾದರೋ ದೇಶದೊಳಗಿಂದ ಕೀಳಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟರಾದರೋ ಸ್ವದೇಶದಿಂದ ತೆಗೆದುಹಾಕಲ್ಪಡುವರು; ದ್ರೋಹಿಗಳು ನಿರ್ಮೂಲವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:22
20 ತಿಳಿವುಗಳ ಹೋಲಿಕೆ  

ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆ ಇದ್ದಾರೆ. ಅವರು ಭಯಭಕ್ತಿಗೆ ಪಾತ್ರರಾದ ಮಹಾದೇವರು. ನಿಮ್ಮ ದೇವರಾದ ಸರ್ವೇಶ್ವರ ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪ ಸ್ವಲ್ಪವಾಗಿ ಹೊರಡಿಸುವರು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡುವುವು.


ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು.


ಹೆದರಿ ನಡೆಯುವವರ ಇಷ್ಟವನು ಈಡೇರಿಸುವನು I ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು II


ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II


ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II


ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.


ಸಜ್ಜನರಿಗೆ ಸರಳತೆ ಮಾರ್ಗದರ್ಶನ, ದುರ್ಜನರಿಗೆ ಅವರ ವಕ್ರತೆ ಸಂಹಾರಕ.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಸರ್ವೇಶ್ವರ, ಇಸ್ರಯೇಲರ ಮೇಲೆ ಬೇರೊಬ್ಬ ಅರಸನನ್ನು ನೇಮಿಸುವರು. ಅವನು ಕೂಡಲೆ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವುದೋ!


ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು