Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:3 - ಕನ್ನಡ ಸತ್ಯವೇದವು C.L. Bible (BSI)

3 ಬುದ್ಧಿಗಾಗಿ ಮೊರೆಯಿಡು, ವಿವೇಕಕ್ಕಾಗಿ ಕೂಗಿಕೊಳ್ಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬುದ್ಧಿಗಾಗಿ ಮೊರೆಯಿಟ್ಟು ವಿವೇಕಕ್ಕಾಗಿ ಕೂಗಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬುದ್ಧಿಗಾಗಿ ಮೊರೆಯಿಡು! ವಿವೇಕಕ್ಕಾಗಿ ಕೂಗಿಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು, ತಿಳುವಳಿಕೆಗಾಗಿ ನಿನ್ನ ಸ್ವರವೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:3
15 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ನನ್ನ ಮೊರೆ ಸೇರಲಿ ಪ್ರಭು, ನಿನ್ನ ಸನ್ನಿಧಿಯ I ನಿನ್ನ ವಾಕ್ಯಾನುಸಾರ ನೀಡು ಜ್ಞಾನೋದಯ II


ನಿನ್ನ ದಾಸ ನಾನು, ದಯಪಾಲಿಸು ಎನಗೆ I ನಿನ್ನ ಕಟ್ಟಳೆಗಳನು ಅರಿವ ತಿಳುವಳಿಕೆ II


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ!


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಜ್ಞಾನದ ಕಡೆಗೆ ಕಿವಿಗೊಡು, ವಿವೇಕದ ಕಡೆಗೆ ಮನತಿರುಗಿಸು.


ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು