Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:4 - ಕನ್ನಡ ಸತ್ಯವೇದವು C.L. Bible (BSI)

4 ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದನ್ನು ಬೆಳ್ಳಿಯಂತೆಯೂ ನಿಕ್ಷೇಪದಂತೆಯೂ ಹುಡುಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬೆಳ್ಳಿಯನ್ನು ಹುಡುಕುವಂತೆ ವಿವೇಕವನ್ನು ಹುಡುಕು. ಅಡಗಿರುವ ಭಂಡಾರದಂತೆ ಅದನ್ನು ಹುಡುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ, ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:4
20 ತಿಳಿವುಗಳ ಹೋಲಿಕೆ  

“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ಎಷ್ಟು ಅಗೆದರೂ ದೊರಕದು ಅಂಥವರಿಗೆ ನಿಧಿನಿಕ್ಷೇಪ ಅದಕ್ಕಿಂತ ಮಿಗಿಲಾಗಿ ಬಯಸಿದರೂ ಬಾರದು ಮರಣ.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II


ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II


ಸಿರಿಸಂಪತ್ತಿಗಿಂತ ಮಿಗಿಲಾಗಿ I ಆನಂದಿಪೆ ನಿನ್ನ ಮಾರ್ಗಿಯಾಗಿ II


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ಬುದ್ಧಿಗಾಗಿ ಮೊರೆಯಿಡು, ವಿವೇಕಕ್ಕಾಗಿ ಕೂಗಿಕೊಳ್ಳು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಅದೇ ದಿನ ಇಸಾಕನ ಕೆಲಸಗಾರರು ತಾವು ತೋಡಿದ್ದ ಬಾವಿಯ ಸಮಾಚಾರದೊಂದಿಗೆ ಬಂದು, “ನಮಗೆ ನೀರು ಸಿಕ್ಕಿತು,” ಎಂದು ವರದಿಮಾಡಿದರು.


ಜ್ಞಾನ ಪಡೆಯಬೇಕೆಂಬುದೇ ಜ್ಞಾನಬೋಧೆಯ ಮೂಲಾಂಶ; ನಿನ್ನ ಸರ್ವಸಂಪತ್ತಿನಿಂದ ವಿವೇಕವನ್ನು ಗಳಿಸಿಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು