Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:7 - ಕನ್ನಡ ಸತ್ಯವೇದವು C.L. Bible (BSI)

7 ಜ್ಞಾನವನ್ನು ಸಜ್ಜನರಿಗೆ ಸೇರಿಸಿಡುವನಾತ, ಸನ್ಮಾರ್ಗಿಗಳಿಗೆ ಕವಚವಾಗಿರುವನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ನೀತಿವಂತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು; ನಿರ್ದೋಷಿಗಳಿಗೆ ಗುರಾಣಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು, ನಿರ್ದೋಷಿಯಾಗಿ ನಡೆದುಕೊಳ್ಳುವವರಿಗೆ ದೇವರು ಗುರಾಣಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:7
16 ತಿಳಿವುಗಳ ಹೋಲಿಕೆ  

ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ಕಾಡುಮೃಗಗಳು ಅದನ್ನು ತುಳಿದಿಲ್ಲ ಸಿಂಹವು ಆ ಮಾರ್ಗದಲ್ಲಿ ಸುಳಿದಿಲ್ಲ.


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು