Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ನೀತಿನ್ಯಾಯಗಳನ್ನು ನೀನರಿತುಕೊಳ್ಳುವೆ, ಸಕಲ ಸನ್ಮಾರ್ಗಸತ್ಯತೆಗಳನ್ನೂ ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ನೀನು ನೀತಿನ್ಯಾಯಗಳನ್ನೂ ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ, ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:9
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ನಿನ್ನ ಕಟ್ಟಳೆಗಳ ಧ್ಯಾನಿ ನಾನಾದುದರಿಂದ I ನಾನಧಿಕ ಜ್ಞಾನಿ ನನ್ನ ಬೋಧಕರೆಲ್ಲರಿಗಿಂತ II


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು, ನೀ ಓಡುವಾಗ ಮುಗ್ಗರಿಸಿ ಬೀಳಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು