Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:10 - ಕನ್ನಡ ಸತ್ಯವೇದವು C.L. Bible (BSI)

10 ಕಳ್ಳ ಕಲ್ಲುತೂಕಗಳನ್ನೂ ಕಳ್ಳ ಅಳತೆಪಾತ್ರೆಗಳನ್ನೂ ಬಳಸುವವರನ್ನು ಕಂಡರೆ ಸರ್ವೇಶ್ವರನಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತೂಕದ ಕಲ್ಲನ್ನೂ ಅಳತೆಯ ಪಾತ್ರೆಯನ್ನೂ ಹೆಚ್ಚಿಸುವದು, ತಗ್ಗಿಸುವದು ಇವೆರಡೂ ಯೆಹೋವನಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೋಸದ ತಕ್ಕಡಿಗಳೂ ಮೋಸದ ಅಳತೆಮಾಪಕಗಳೂ ಯೆಹೋವನಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:10
10 ತಿಳಿವುಗಳ ಹೋಲಿಕೆ  

ತಾರತಮ್ಯದ ತೂಕದ ಕಲ್ಲು ಸರ್ವೇಶ್ವರನಿಗೆ ಅಸಹ್ಯ; ಮೋಸದ ತಕ್ಕಡಿಯನ್ನು ಬಳಸುವುದು ಸರಿಯಲ್ಲ.


ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.


ನ್ಯಾಯದ ತ್ರಾಸುತಕ್ಕಡಿಗಳೆಲ್ಲ ಸರ್ವೇಶ್ವರನ ಏರ್ಪಾಡು; ಚೀಲದ ಕಲ್ಲುತೂಕಗಳೆಲ್ಲ ಆತನ ಕೈಕೆಲಸ.


“ನ್ಯಾಯ ವಿಚಾರಣೆ, ತೂಕ ಅಳತೆ, ಪರಿಮಾಣ ಇವುಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ತಕ್ಕಡಿ, ತೂಕದಕಲ್ಲು, ಕೊಳಗ, ಸೇರು ಇವುಗಳೆಲ್ಲವು ನ್ಯಾಯಬದ್ಧವಾಗಿಯೇ ಇರಬೇಕು. ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರ ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು