Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:12 - ಕನ್ನಡ ಸತ್ಯವೇದವು C.L. Bible (BSI)

12 ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಉಂಟುಮಾಡಿದವ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮಗೆ ನೋಡಲು ಕಣ್ಣುಗಳಿವೆ. ಕೇಳಲು ಕಿವಿಗಳಿವೆ. ಅವುಗಳನ್ನು ನಮಗೋಸ್ಕರ ಉಂಟುಮಾಡಿದವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಯೆಹೋವ ದೇವರು ಉಂಟುಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:12
9 ತಿಳಿವುಗಳ ಹೋಲಿಕೆ  

ಕಿವಿಮಾಡಿದವನು ಕೇಳದಿರುವನೋ? I ಕಣ್ಣುಕೊಟ್ಟವನು ನೋಡದಿರುವನೋ? II


ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ I ನನ್ನ ಕಣ್ಗಳಿಂದ ನೀ ತೆಗೆದುಬಿಡು ಅಂಧತೆ II


ಅದಕ್ಕೆ ಸರ್ವೇಶ್ವರ, “ಮನುಷ್ಯರಿಗೆ ಬಾಯಿಕೊಟ್ಟವರು ಯಾರು? ಒಬ್ಬನನ್ನು ಮೂಕನಾಗಿ, ಮತ್ತೊಬ್ಬನನ್ನು ಕಿವುಡನಾಗಿ, ಇನ್ನೊಬ್ಬನನ್ನು ಕಣ್ಣುಳ್ಳವನಾಗಿ, ಮಗದೊಬ್ಬನನ್ನು ಕಣ್ಣಿಲ್ಲದವನಾಗಿ ಇಡುವವರು ಯಾರು? ಸರ್ವೇಶ್ವರನಾಗಿರುವ ನಾನೇ ಅಲ್ಲವೆ?


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ದೇಹವಿಡೀ ಕಣ್ಣೇ ಆದರೆ ಅದು ಕೇಳುವ ಬಗೆ ಹೇಗೆ? ಅಥವಾ ಅದು ಇಡೀ ಕಿವಿಯೇ ಆದರೆ, ಮೂಸಲು ಮೂಗು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು