Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:15 - ಕನ್ನಡ ಸತ್ಯವೇದವು C.L. Bible (BSI)

15 ಹೊನ್ನು ಉಂಟು, ಹವಳದ ರಾಶಿ ಉಂಟು; ಆದರೆ ತಿಳುವಳಿಕೆಯುಳ್ಳ ತುಟಿಗಳು ಬೆಲೆಮೀರಿದ ಆಭರಣಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯಾಭರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಂಗಾರಕ್ಕಿಂತಲೂ ಮಾಣಿಕ್ಯದ ಸಮೃದ್ಧಿಗಿಂತಲೂ ಜ್ಞಾನದ ಮಾತುಗಳನ್ನಾಡುವ ತುಟಿಗಳು ಅಮೂಲ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:15
17 ತಿಳಿವುಗಳ ಹೋಲಿಕೆ  

ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಜ್ಞಾನವೆಂಬುದು ಹವಳಕ್ಕಿಂತ ಶ್ರೇಷ್ಠ, ಇಷ್ಟವಸ್ತುಗಳಾವುವು ಅದಕ್ಕೆ ಸಾಟಿಯಿಲ್ಲ.


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.


ಮಾಣಿಕ್ಯಕ್ಕಿಂತ ಜ್ಞಾನದ ಬೆಲೆ ಅಮೂಲ್ಯ. ನಿನಗಿಷ್ಟವಾದುದಾವುದೂ ಅದಕ್ಕೆ ಸಾಟಿಯಿಲ್ಲ.


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಕೊಳ್ಳುವಾಗ ‘ಅದು ಚೆನ್ನಾಗಿಲ್ಲ, ಇದು ಚೆನ್ನಾಗಿಲ್ಲ’ ಅನ್ನುತ್ತಾನೆ; ಕೊಂಡಾದ ಮೇಲೆ ಮಾಡಿದ ಚೌಕಾಶಿಗಾಗಿ ಹೆಚ್ಚಳ ಪಡುತ್ತಾನೆ.


ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.


ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.


ಅಂಗೀಕರಿಸಿರಿ ಬೆಳ್ಳಿಗಿಂತ ಶ್ರೇಷ್ಠವಾದ ಬೋಧನೆಯನ್ನು ಅಪರಂಜಿಗಿಂತ ಅಪೂರ್ವವಾದ ಉಪದೇಶವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು