Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:16 - ಕನ್ನಡ ಸತ್ಯವೇದವು C.L. Bible (BSI)

16 ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ; ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನು ಕಳೆದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:16
12 ತಿಳಿವುಗಳ ಹೋಲಿಕೆ  

ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.


ಅಪರಿಚಿತನಿಗೆ ಜಾಮೀನು ನಿಂತರೆ ಹಾನಿ; ಜಾಮೀನನ್ನು ತೊರೆದುಬಿಟ್ಟರೆ ನೆಮ್ಮದಿ.


ವೇಶ್ಯೆ ಒಂದು ಆಳವಾದ ಬಾವಿ; ವ್ಯಭಿಚಾರಿಣಿ ಇಕ್ಕಟ್ಟಾದ ಗುಳಿ.


ಇಗೋ, ಅವನನ್ನು ಎದುರುಗೊಳ್ಳುತ್ತಾಳೆ ವೇಷಧಾರಿಯಾದ ಕಪಟಸ್ತ್ರೀಯೊಬ್ಬಳು.


ಅವು ನಿನ್ನನ್ನು ಕಾಪಾಡುವುವು ವ್ಯಭಿಚಾರಿಣಿಯಿಂದ, ಸವಿಮಾತಾಡುವ ಆ ಪರಸ್ತ್ರೀಯಿಂದ.


ವ್ಯಭಿಚಾರಿಣಿಯ ತುಟಿಗಳು ಜೇನುಗರೆಯುತ್ತವೆ; ಎಣ್ಣೆಗಿಂತ ಮೃದು ಅವಳ ವಾಣಿ.


ವಿವೇಕವು ನಿನ್ನನ್ನು ತಪ್ಪಿಸುವುದು ಜಾರಳಿಂದ, ಸವಿಮಾತಾಡುವ ಆ ಪರಸ್ತ್ರೀಯಳಿಂದ.


ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನಿಗಾಗಿ ಕೈಮೇಲೆ ಕೈಯಿಟ್ಟು ಪ್ರಮಾಣಮಾಡಿದ್ದರೆ,


ಹೊನ್ನು ಉಂಟು, ಹವಳದ ರಾಶಿ ಉಂಟು; ಆದರೆ ತಿಳುವಳಿಕೆಯುಳ್ಳ ತುಟಿಗಳು ಬೆಲೆಮೀರಿದ ಆಭರಣಗಳು.


ವಂಚಿಸಿ ಪಡೆದ ಊಟ ಬಲು ರುಚಿ; ಆಮೇಲೆ ಬಾಯಿ ತುಂಬ ಕಲ್ಲುಜಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು