Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:20 - ಕನ್ನಡ ಸತ್ಯವೇದವು C.L. Bible (BSI)

20 ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನ ಜೀವಿತವು ಕತ್ತಲೆಯಲ್ಲಿ ಆರಿಹೋದ ದೀಪದಂತೆ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:20
16 ತಿಳಿವುಗಳ ಹೋಲಿಕೆ  

“ತಂದೆಯನ್ನಾಗಲಿ, ತಾಯಿಯನ್ನಾಗಲಿ ಶಪಿಸುವವನಿಗೆ ಮರಣ ದಂಡನೆ ಆಗಬೇಕು.”


ತಂದೆಯನ್ನೇ ಶಪಿಸುವ, ತಾಯಿಗು ಮರ್ಯಾದೆಯನ್ನೂ ತರದ ಮಕ್ಕಳುಂಟು.


ಕೆಟ್ಟವನಿಗೆ ಶುಭಕಾಲ ಬಾರದು, ದುಷ್ಟರ ದೀಪ ಆರಿಹೋಗುವುದು.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಗಾಗಲೀ, ತಾಯಿಗಾಗಲೀ, ಶಾಪಹಾಕುವವನಿಗೆ ಮರಣದಂಡನೆ ಆಗಲೇಬೇಕು’ ಎಂದು ದೇವರ ಕಟ್ಟಳೆ ಇದೆ.


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


“ತಂದೆಗಾಗಲಿ ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣಶಿಕ್ಷೆಗೆ ಅವರೇ ಕಾರಣ.


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಸಜ್ಜನರ ಬೆಳಕು ಪ್ರಜ್ವಲಿಸುವುದು; ದುರ್ಜನರ ದೀಪವು ಆರಿಹೋಗುವುದು.


“ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಬೇಗಬೇಗನೆ ಬಾಚಿಕೊಂಡ ಮೊದಲ ಸೊತ್ತು, ಕೊನೆಯಲ್ಲಿ ಕಳೆದುಹೋಗುವುದು ನಿಶ್ಚಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು