Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:23 - ಕನ್ನಡ ಸತ್ಯವೇದವು C.L. Bible (BSI)

23 ತಾರತಮ್ಯದ ತೂಕದ ಕಲ್ಲು ಸರ್ವೇಶ್ವರನಿಗೆ ಅಸಹ್ಯ; ಮೋಸದ ತಕ್ಕಡಿಯನ್ನು ಬಳಸುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತೂಕದ ಕಲ್ಲನ್ನು ಹೆಚ್ಚಿಸುವದು ತಗ್ಗಿಸುವದು ಯೆಹೋವನಿಗೆ ಅಸಹ್ಯ; ಮೋಸದ ತ್ರಾಸು ಒಳ್ಳೇದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನಿಗೆ ಅನ್ಯಾಯದ ಅಳತೆಮಾಪಕವು ಅಸಹ್ಯ; ಮೋಸದ ತಕ್ಕಡಿಗಳು ಅಪರಾಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:23
6 ತಿಳಿವುಗಳ ಹೋಲಿಕೆ  

ಕಳ್ಳ ಕಲ್ಲುತೂಕಗಳನ್ನೂ ಕಳ್ಳ ಅಳತೆಪಾತ್ರೆಗಳನ್ನೂ ಬಳಸುವವರನ್ನು ಕಂಡರೆ ಸರ್ವೇಶ್ವರನಿಗೆ ಅಸಹ್ಯ.


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.”


ನಿಮ್ಮ ತಕ್ಕಡಿಯೂ ಧಾನ್ಯದ ಅಳತೆಯೂ ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.


ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.


“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;


“ಹೆಚ್ಚುಕಡಿಮೆಯಾಗಿರುವ ಎರಡು ವಿಧವಾದ ಕಳ್ಳತೂಕದ ಬಟ್ಟುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು