Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:24 - ಕನ್ನಡ ಸತ್ಯವೇದವು C.L. Bible (BSI)

24 ಮಾನವನ ಸ್ಥಿತಿಗತಿ ಸರ್ವೇಶ್ವರನ ಏರ್ಪಾಡು; ಮನುಷ್ಯ ತನ್ನ ಮಾರ್ಗವನ್ನು ತಾನೇ ಹೇಗೆ ತಿಳಿದಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಭವಿಷ್ಯತ್ತನ್ನು ನಿರ್ಣಯಿಸುವವನು ಯೆಹೋವನೇ ಆಗಿರುವಾಗ, ತನ್ನ ಭವಿಷ್ಯತ್ತನ್ನು ಅರ್ಥಮಾಡಿಕೊಳ್ಳಲು ಯಾರಿಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:24
10 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ಮಾನವನ ಗುರಿಸಾಧನೆ ಅವನ ಸ್ವಾಧೀನದಲ್ಲಿಲ್ಲ. ಸರಿದಿಸೆಯಲ್ಲಿ ಅವನು ಹೆಜ್ಜೆಯಿಡಲಾರನೆಂದು ನಿಮಗೆ ಗೊತ್ತಿದೆಯಲ್ಲಾ.


ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ I ಅವನ ನಡತೆಗೆ ಆತನೆ ಮಾರ್ಗದರ್ಶನ II


ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು I ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು II


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು