Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:25 - ಕನ್ನಡ ಸತ್ಯವೇದವು C.L. Bible (BSI)

25 ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದುಡುಕಿ ಮುಡುಪುಕಟ್ಟುವದು ಮನುಷ್ಯನಿಗೆ ಉರುಲು; ಹರಕೆಹೊತ್ತ ಮೇಲೆ ವಿಚಾರಪಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:25
15 ತಿಳಿವುಗಳ ಹೋಲಿಕೆ  

“ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.


“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಬುದ್ಧಿಹೀನನಿಗೆ ಬಾಯೇ ನಾಶ, ತುಟಿಗಳೇ ಅವನಿಗೆ ಪಾಶ.


ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.


ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ.


ನೀವು ಹರಕೆಮಾಡದಿದ್ದರೆ ದೋಷವೇನೂ ಇಲ್ಲ.


ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಸರ್ವೇಶ್ವರನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.


“ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹಾದುಹೋಗುವಾಗ ಇಷ್ಟಾನುಸಾರ ಹಣ್ಣುಗಳನ್ನು ತಿನ್ನಬಹುದು. ಆದರೆ ಬುಟ್ಟಿಯಲ್ಲಿ ಹಾಕಿಕೊಂಡು ಹೋಗಬಾರದು.


ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರುತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿ; ಯುದ್ಧ ನಿಮಿತ್ತ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು