Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:28 - ಕನ್ನಡ ಸತ್ಯವೇದವು C.L. Bible (BSI)

28 ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು; ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದುಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:28
11 ತಿಳಿವುಗಳ ಹೋಲಿಕೆ  

ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ.


ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ‍ ಪ್ರಭೂ, ನಿನ್ನನೆ ಹಾಡಿಹೊಗಳುವೆನು II


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಅರಸನಿಗಿದೆ ಭರವಸೆ ಪ್ರಭುವಿನಲಿ I ಅವನಚಲನು, ಪರಾತ್ಪರನ ಕೃಪೆಯಲಿ II


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II


ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II


ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


“ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು