Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:30 - ಕನ್ನಡ ಸತ್ಯವೇದವು C.L. Bible (BSI)

30 ಗಾಯಗೊಳಿಸುವ ಏಟು ಕೆಟ್ಟದ್ದನ್ನು ತೊಳೆಯಬಲ್ಲ ಮದ್ದು; ಅಂತರಂಗವನ್ನೂ ಮುಟ್ಟಬಲ್ಲದು ಆ ಪೆಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವವು; ಏಟುಗಳು ಅಂತರಂಗಕ್ಕೂ ತಗಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದಂಡನೆಯು ತಪ್ಪನ್ನು ನಿಲ್ಲಿಸುತ್ತದೆ; ನೋವು ವ್ಯಕ್ತಿಯನ್ನು ಬದಲಾಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:30
8 ತಿಳಿವುಗಳ ಹೋಲಿಕೆ  

ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ.


ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ.


ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.


ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ದಂಡಿಸುವೆನವರ ದ್ರೋಹವನು ದಂಡದಿಂದ I ಶಿಕ್ಷಿಸುವೆನವರ ಅಪರಾಧವನು ಚಾಟಿಯಿಂದ II


ಮಿತ್ರನು ಕೊಡುವ ಗುದ್ದು ಹಿತಕರ; ಶತ್ರುವು ಕೊಡುವ ಮುದ್ದು ಮೋಸಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು