Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:10 - ಕನ್ನಡ ಸತ್ಯವೇದವು C.L. Bible (BSI)

10 ದುರಾತ್ಮನ ಮನಸ್ಸು ಕೇಡಿನ ಮೇಲೆ; ದಯೆತೋರಿಸನಾತ ನೆರೆಯವನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುರಾತ್ಮನು ಕೇಡಿನ ಮೇಲೆ ಮನಸ್ಸಿಡುವನು; ನೆರೆಯವನಿಗೂ ದಯೆತೋರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೆಡುಕರು ಕೇಡುಮಾಡುವುದಕ್ಕೇ ಇಷ್ಟಪಡುವರು; ಅವರು ತಮ್ಮ ಸುತ್ತಮುತ್ತಲಿರುವ ಜನರಿಗೆ ಕರುಣೆ ತೋರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:10
19 ತಿಳಿವುಗಳ ಹೋಲಿಕೆ  

ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ಕೇಡನ್ನು ಬಗೆಯಬೇಡ ನೆರೆಯವನಿಗೆ, ಪಕ್ಕದಲ್ಲೆ ನಂಬಿಕೆಯಿಂದ ವಾಸಿಸುವವನಿಗೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. ಅವರಂತೆ ನಾವು ಕೆಟ್ಟದಾದವುಗಳನ್ನು ಆಶಿಸಬಾರದು.


ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?


ಕೆಡುಕರ ಕೋಟೆ ಪುಡಿಪುಡಿಯಾಗುವುದು; ಒಳ್ಳೆಯವರ ಬುಡ ಫಲಬಿಡುವುದು.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಅವರು ಸಂತೋಷಿಸುವುದು ಕೇಡನ್ನು ಮಾಡುವುದರಲ್ಲಿ. ಉಲ್ಲಾಸಿಸುವುದು ಕೆಟ್ಟವರ ದುಷ್ಟತನದಲ್ಲಿ,


ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.


ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು