Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:17 - ಕನ್ನಡ ಸತ್ಯವೇದವು C.L. Bible (BSI)

17 ಭೋಗಾಸಕ್ತನು ಬಡವನಾಗುವನು, ಮಧ್ಯಸುಗಂಧಗಳನ್ನು ಬಯಸುವವನು ಧನವಂತನಾಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ [ಸುಗಂಧ] ತೈಲವನ್ನೂ ಆಶಿಸುವವನು ನಿರ್ಭಾಗ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸುಖವನ್ನು ಪ್ರೀತಿಸುವವನು ಬಡವನಾಗುವನು. ದ್ರಾಕ್ಷಾರಸವನ್ನೂ ತೈಲವನ್ನೂ ಪ್ರೀತಿಸುವವನು ಐಶ್ವರ್ಯವಂತನಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ, ತೈಲವನ್ನೂ ಅಪೇಕ್ಷಿಸುವವನು ಎಂದಿಗೂ ಧನವಂತನಾಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:17
9 ತಿಳಿವುಗಳ ಹೋಲಿಕೆ  

ಕುಡುಕನಿಗೂ ಹೊಟ್ಟೆಬಾಕನಿಗೂ ಕಾದಿದೆ ದುರ್ಗತಿ; ಹರಕು ಬಟ್ಟೆಗಳನ್ನು ಹೊದಿಸುವುದು ಅವರ ನಿದ್ರಾಸಕ್ತಿ.


ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.


ದುರ್ಜನರು ಸಜ್ಜನರಿಗೆ ದ್ರೋಹಿಗಳು; ನೀತಿವಂತರಿಗೆ ಮಾಡಲಾಶಿಸುವ ಕೇಡಿಗೆ ತಾವೇ ಈಡಾಗುವರು.


ಕುಡುಕರೊಡನೆ, ಹೊಟ್ಟೆಬಾಕರೊಡನೆ ಸೇರಬೇಡ; ಮಿತಿಮೀರಿ ಮಾಂಸ ತಿನ್ನುವ ಜನರ ಜೊತೆ ನಿನಗೆ ಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು