Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:2 - ಕನ್ನಡ ಸತ್ಯವೇದವು C.L. Bible (BSI)

2 ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:2
18 ತಿಳಿವುಗಳ ಹೋಲಿಕೆ  

ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


“ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಮೂರ್ಖನ ನಡತೆ ಸ್ವಂತ ಮೆಚ್ಚುಗೆಗೆ; ಬುದ್ಧಿವಂತ ಕಿವಿಗೊಡುವನು ಉಚಿತಾಲೋಚನೆಗೆ.


ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.


ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


'ತೆಕೇಲ್’ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನಿನ್ನ ತೂಕ ಕಡಿಮೆಯಾಗಿ ಕಂಡುಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು