Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:30 - ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:30
20 ತಿಳಿವುಗಳ ಹೋಲಿಕೆ  

ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ವ್ಯರ್ಥಗೊಳಿಸುವವರಾರು ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ಯೋಜನೆಯನು? ಹಿಂತೆಗೆವವರಾರು ಅವರೆತ್ತಿದ ಕೈಯನು?.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.


ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು.


ಈಗ ಇರುವ ಪ್ರತಿಯೊಂದು ಹಿಂದಿನಿಂದಲೇ ಹೆಸರುವಾಸಿಯಾಗಿದೆ. ಮನುಷ್ಯನು ಯಾರೆಂದು ಗೊತ್ತಿದೆ. ತನಗಿಂತ ಬಲಿಷ್ಠನ ಸಂಗಡ ವಾದಿಸಲು ಅವನಿಂದಾಗದು.


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ಇಸ್ರಯೇಲಿನ ಕೆಲವು ಜನರು ನಮ್ಮ ನಾಡಿನಲ್ಲಿ ಸಂಚರಿಸಿ ನೋಡಲು ಈ ರಾತ್ರಿ ನಗರಕ್ಕೆ ಬಂದಿದ್ದಾರೆಂದು ಜೆರಿಕೋವಿನ ಅರಸನಿಗೆ ತಿಳಿಸಲಾಯಿತು.


ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.


ಆಕೆ ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ, ಬಾ; ಏಕೆ ನೀನು ಅನ್ಯಳೆಂದು ನಟಿಸುತ್ತಿರುವೆ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.


ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.


ಅದರ ಮೂಗಿಗೆ ಆಪನು ಪೋಣಿಸಬಲ್ಲೆಯಾ? ಅದರ ದವಡೆಗೆ ಮುಳ್ಳನು ಚುಚ್ಚಬಲ್ಲೆಯಾ?


ಯುದ್ಧಕ್ಕೆ ಬೇಕಾದ ವಿವೇಕ ಹಾಗೂ ಶಕ್ತಿ ಉಂಟೆಂಬ ನಿನ್ನ ಮಾತು ಬರೀ ಬಾಯಿಮಾತು ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು