Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:6 - ಕನ್ನಡ ಸತ್ಯವೇದವು C.L. Bible (BSI)

6 ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ [ನಾಶಕರ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಮೋಸದಿಂದ ಐಶ್ವರ್ಯವಂತನಾದರೆ, ಆ ಐಶ್ವರ್ಯವು ಬಹುಬೇಗನೆ ಇಲ್ಲವಾಗುತ್ತದೆ. ನಿನ್ನ ಐಶ್ವರ್ಯವು ನಿನ್ನನ್ನು ಮರಣಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:6
12 ತಿಳಿವುಗಳ ಹೋಲಿಕೆ  

ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು.


ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.


ಬೇಗಬೇಗನೆ ಬಾಚಿಕೊಂಡ ಮೊದಲ ಸೊತ್ತು, ಕೊನೆಯಲ್ಲಿ ಕಳೆದುಹೋಗುವುದು ನಿಶ್ಚಿತ.


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೆ ಕೊಯ್ಯುವನು; ಅವನ ಸಿಟ್ಟು ಅವನನ್ನೆ ಸುಟ್ಟುಬಿಡುವುದು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಕೊಳ್ಳುವಾಗ ‘ಅದು ಚೆನ್ನಾಗಿಲ್ಲ, ಇದು ಚೆನ್ನಾಗಿಲ್ಲ’ ಅನ್ನುತ್ತಾನೆ; ಕೊಂಡಾದ ಮೇಲೆ ಮಾಡಿದ ಚೌಕಾಶಿಗಾಗಿ ಹೆಚ್ಚಳ ಪಡುತ್ತಾನೆ.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು