Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:1 - ಕನ್ನಡ ಸತ್ಯವೇದವು C.L. Bible (BSI)

1 ಅತುಳ ಐಶ್ವರ್ಯಕ್ಕಿಂತ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತ ಪ್ರೀತಿ ವಿಶ್ವಾಸ ಅಮೂಲ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿ ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:1
7 ತಿಳಿವುಗಳ ಹೋಲಿಕೆ  

ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಲೇಸು, ಜನನದ ದಿನಕ್ಕಿಂತ ಮರಣದ ದಿನ ಲೇಸು.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ಅರಸ ದಾವೀದನ ಸೇವಕರು ನಮ್ಮ ಒಡೆಯನೂ ಅರಸನೂ ಆದ ದಾವೀದನ ಮುಂದೆ ಬಂದು, ‘ನಿಮ್ಮ ದೇವರು ನಿಮ್ಮ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ! ರಾಜ್ಯವನ್ನು ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಅಭಿವೃದ್ಧಿಗೊಳಿಸಲಿ!’ ಎಂದು ಅವನನ್ನು ಹರಸಿದ್ದಾರೆ. ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು,


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು