ಜ್ಞಾನೋಕ್ತಿಗಳು 22:10 - ಕನ್ನಡ ಸತ್ಯವೇದವು C.L. Bible (BSI)10 ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವದು; ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ. ಆಗ ಜಗಳವಾಗಲಿ ವಾದಗಳಾಗಲಿ ಅವಮಾನಗಳಾಗಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; ವಿವಾದವೂ ನಿಂದೆಯೂ ನಿಂತುಹೋಗುವುವು. ಅಧ್ಯಾಯವನ್ನು ನೋಡಿ |