Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:15 - ಕನ್ನಡ ಸತ್ಯವೇದವು C.L. Bible (BSI)

15 ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೂರ್ಖತನವು ಹುಡುಗನ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:15
11 ತಿಳಿವುಗಳ ಹೋಲಿಕೆ  

ಬೆತ್ತಹಿಡಿಯದ ತಂದೆ ಮಗನಿಗೆ ಶತ್ರು; ಎಚ್ಚರಿಕೆಯಿಂದ ಶಿಕ್ಷಿಸುವ ತಂದೆ ಮಗನಿಗೆ ಮಿತ್ರನು.


ತಿದ್ದಿಕೊಳ್ಳುವನೆಂಬ ನಂಬಿಕೆಯಿರುವಾಗಲೆ ಮಗನನ್ನು ಶಿಕ್ಷಿಸು; ಇಲ್ಲವಾದರೆ ಅವನ ಅಳಿವಿಗೆ ನೀನೇ ಕಾರಣವಾಗುವೆ.


ಬೆತ್ತ ಬೆದರಿಕೆಗಳು ಜ್ಞಾನ ತರುತ್ತವೆ; ಶಿಕ್ಷಿಸದೆ ಬಿಟ್ಟ ಮಗನು ತಾಯಿಗೆ ತರುತ್ತಾನೆ ಅಪಕೀರ್ತಿ.


ನಿನ್ನ ಮಗನನ್ನು ದಂಡಿಸಿ ಸರಿಪಡಿಸು; ಅವನು ನಿನ್ನನ್ನು ಸಂತೋಷಪಡಿಸುವನು, ಮನೋಲ್ಲಾಸಗೊಳಿಸುವನು.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ಗಾಯಗೊಳಿಸುವ ಏಟು ಕೆಟ್ಟದ್ದನ್ನು ತೊಳೆಯಬಲ್ಲ ಮದ್ದು; ಅಂತರಂಗವನ್ನೂ ಮುಟ್ಟಬಲ್ಲದು ಆ ಪೆಟ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು