Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:16 - ಕನ್ನಡ ಸತ್ಯವೇದವು C.L. Bible (BSI)

16 ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ ಬಲ್ಲಿದರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:16
14 ತಿಳಿವುಗಳ ಹೋಲಿಕೆ  

ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.


ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು