Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:18 - ಕನ್ನಡ ಸತ್ಯವೇದವು C.L. Bible (BSI)

18 ಆ ನುಡಿಗಳನ್ನು ನಿನ್ನ ಅಂತರಂಗದಲ್ಲಿ ಕಾದಿಡು; ಅವು ನಿನ್ನ ತುಟಿಯ ಮೇಲೆ ಸಿದ್ಧವಿದ್ದರೆ ಒಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ಈ ಉಪದೇಶಗಳನ್ನು ಜ್ಞಾಪಕದಲ್ಲಿಟ್ಟುಕೊಂಡರೆ ನಿನಗೆ ಒಳ್ಳೆಯದಾಗುವುದು. ನೀನು ಈ ಉಪದೇಶಗಳನ್ನು ಹೇಳಬಲ್ಲವನಾದರೆ ನಿನಗೆ ಅನುಕೂಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಅವುಗಳನ್ನು ನಿನ್ನ ಹೃದಯದಲ್ಲಿ ಇಟ್ಟು ಕಾಪಾಡು, ಅವು ನಿನ್ನ ತುಟಿಗಳ ಮೇಲೆ ಸಿದ್ಧವಿದ್ದರೆ ಮೆಚ್ಚುಗೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:18
23 ತಿಳಿವುಗಳ ಹೋಲಿಕೆ  

ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ಜ್ಞಾನ ಉದಯಿಸುವುದು ನಿನ್ನ ಹೃದಯದೊಳಗೆ, ತಿಳುವಳಿಕೆ ಬೆಳಗುವುದು ನಿನ್ನ ಆತ್ಮದೊಳಗೆ.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.


ಕೇಳಿ, ನಾನು ಹೇಳುವ ಮಹತ್ವಪೂರ್ಣವಾದ ವಿಷಯವನ್ನು ನನ್ನ ನಾಲಿಗೆ ನುಡಿಯುವ ಯಥಾರ್ಥವಾದ ಸಂಗತಿಯನ್ನು


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.


ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.


ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.


ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.


ಆಕೆಯ ದಾರಿ ಸುಖಕರ, ಆಕೆಯ ಮಾರ್ಗ ಕ್ಷೇಮಕರ.


ನನಗೆ ಕಲಿಸಿರುವೆ ನಿನ್ನ ನಿಬಂಧನೆಗಳನು I ನನ್ನ ಬಾಯಿ ಉಸುರಲಿ ನಿನ್ನ ಗುಣಗಾನವನು II


ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಸರ್ವೇಶ್ವರನಲ್ಲಿ ನೀನು ಭರವಸೆ ಇಡುವಂತೆ, ಅವುಗಳನ್ನು ತಿಳಿಸಿರುವೆನು ಇಂದೆ.


ಮಗನೇ, ನನ್ನ ಮಾತನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.


ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು