Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನೇ ಅವರ ವ್ಯಾಜ್ಯವನ್ನು ನಡಿಸಿ ಸೂರೆಮಾಡಿದವರ ಜೀವವನ್ನು ಸೂರೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:23
23 ತಿಳಿವುಗಳ ಹೋಲಿಕೆ  

ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಅವರನ್ನು ಕಾಪಾಡುವ ಸರ್ವೇಶ್ವರ ಬಲಶಾಲಿ, ಆತ ನಿನ್ನೊಡನೆ ವಾದಿಸಬಲ್ಲ ಅವರ ಪರವಾಗಿ.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.


ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.


ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ.


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ಸಾಧಿಸುವನು ಪ್ರಭು ನ್ಯಾಯನೀತಿಯನು I ದೊರಕಿಸುವನು ಶೋಷಿತರಿಗೆ ನ್ಯಾಯವನು II


ಭಜಿಸುವರು ಸಜ್ಜನರು ನಿನ್ನಾ ಸಿರಿನಾಮವನು I ಬಾಳ್ವರು ಸುಮನಸ್ಕರು ಬಿಡದೆ ನಿನ್ನ ಸನ್ನಿಧಿಯನು II


ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರನ್ನೇ ಎಳೆದೊಯ್ಯುವುದು ಅವರ ಹಿಂಸಾಚಾರ.


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು