ಜ್ಞಾನೋಕ್ತಿಗಳು 22:9 - ಕನ್ನಡ ಸತ್ಯವೇದವು C.L. Bible (BSI)9 ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು; ತನ್ನ ಅನ್ನವನ್ನು ಬಡವರಿಗೆ ಕೊಡುತ್ತಾನಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ. ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಆ ಭೀಕರ ಇಕ್ಕಟ್ಟಿಗೆ ಸಿಕ್ಕಿಸಿದ ಕಾಲದಲ್ಲಿ ಅಂಗಾಲನ್ನೂ ನೆಲಕ್ಕೆ ಇಡದಷ್ಟು ಕೋಮಲ ಹಾಗು ಸುಕುಮಾರಿಯಾದ ಸ್ತ್ರೀ ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ಗುಟ್ಟಾಗಿ ತಿನ್ನಲಾಶಿಸುವಳು; ಪ್ರಾಣಪ್ರಿಯರಾದ ಗಂಡನಿಗು, ಮಗನಿಗು, ಮಗಳಿಗು ಕೊಡಲಿಚ್ಛಿಸದೆ ಮೋರೆಯನ್ನು ಸಿಂಡರಿಸಿಕೊಳ್ಳುವಳು.